ಸಾಹಿತ್ಯ : ಚಿ.ಉದಯಶಂಕರ್
ಸಂಗೀತ : ಉಪೇಂದ್ರ ಕುಮಾರ್
ಅಪ್ಲೋಡ್ : ಪಿ.ಆರ್.ನಂದನ್ ಭಟ್
ಎಂಥ ಅಂದ ಎಂಥ ಚಂದ ಶಾರದಮ್ಮ ನೀನು
ಎಂಥ ಅಂದ ಎಂಥ ಚಂದ ಶಾರದಮ್ಮ ನಿನ್ನ
ನೋಡಲೆರಡು ಕಣ್ಣು ನನಗೆ ಸಾಲದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ
ಎಂಥ ಅಂದ ಎಂಥ ಚಂದ ಶಾರದಮ್ಮ ನಿನ್ನ
ನೋಡಲೆರಡು ಕಣ್ಣು ನನಗೆ ಸಾಲದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ
ಇನ್ನು ಇನ್ನು ನೋಡುವಾಸೆ ತುಂಬಿತಮ್ಮ
ಇನ್ನು ಕೋಟಿ ಜನುಮ ಬರಲಿ ನನಗೆ ಸಾಲದಮ್ಮ
ಇನ್ನು ಇನ್ನು ನೋಡುವಾಸೆ ತುಂಬಿತಮ್ಮ
ಇನ್ನು ಕೋಟಿ ಜನುಮ ಬರಲಿ ನನಗೆ ಸಾಲದಮ್ಮ
ಅಭಯ ಹಸ್ತ ನೋಡಿ ಜೀವ ಕುಣಿಯಿತಮ್ಮ ನಿನ್ನ
ಅಭಯ ಹಸ್ತ ನೋಡಿ ಜೀವ ಕುಣಿಯಿತಮ್ಮ ನಿನ್ನ
ಪಾದ ಕಮಲದಲ್ಲಿ ಶಿರವು ಬಾಗಿತಮ್ಮ ನಿನ್ನ
ಪಾದ ಕಮಲದಲ್ಲಿ ಶಿರವು ಬಾಗಿತಮ್ಮ
ಎಂಥ ಅಂದ ಎಂಥ ಚಂದ ಶಾರದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ
ಎಂಥ ಶಕ್ತಿ ನಿನ್ನಲಿದೆಯೋ ಶಾರದಮ್ಮ
ನಿನ್ನ ನೋಡಿ ಹಾಡೋ ಆಸೆ ಬಂದಿತಮ್ಮ
ಎಂಥ ಶಕ್ತಿ ನಿನ್ನಲಿದೆಯೋ ಶಾರದಮ್ಮ
ನಿನ್ನ ನೋಡಿ ಹಾಡೋ ಆಸೆ ಬಂದಿತಮ್ಮ
ರತ್ನದಂಥ ಮಾತುಗಳನೆ ಆಡಿಸಮ್ಮ ಒಳ್ಳೆ
ರತ್ನದಂಥ ಮಾತುಗಳನೆ ಆಡಿಸಮ್ಮ ಒಳ್ಳೆ
ರಾಗ ಭಾವ ಭಕ್ತಿ ತುಂಬಿ ಹಾಡಿಸಮ್ಮ ಒಳ್ಳೆ
ರಾಗ ಭಾವ ಭಕ್ತಿ ತುಂಬಿ ಹಾಡಿಸಮ್ಮ
ಅಲ್ಲಿ ಇಲ್ಲಿ ಓಡೋ ಮನಸು ನನ್ನದಮ್ಮ
ಬೇಗ ಬಂದು ನೆಲಸು ಅಲ್ಲಿ ಶಾರದಮ್ಮ
ಅಲ್ಲಿ ಇಲ್ಲಿ ಓಡೋ ಮನಸು ನನ್ನದಮ್ಮ
ಬೇಗ ಬಂದು ನೆಲಸು ಅಲ್ಲಿ ಶಾರದಮ್ಮ
ಬೇರೆ ಏನು ಬೇಕು ಎಂದು ಕೇಳೆನಮ್ಮ ನಿನ್ನ
ಬೇರೆ ಏನು ಬೇಕು ಎಂದು ಕೇಳೆನಮ್ಮ ನನ್ನ
ವೀಣೆ ತಂತಿ ಮಾಡಿ ನುಡಿಸು ಶಾರದಮ್ಮ ನನ್ನ
ವೀಣೆ ತಂತಿ ಮಾಡಿ ನುಡಿಸು ಶಾರದಮ್ಮ
ಎಂಥ ಅಂದ ಎಂಥ ಚಂದ ಶಾರದಮ್ಮ ನೀನು
ಎಂಥ ಅಂದ ಎಂಥ ಚಂದ ಶಾರದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ
ನಿನ್ನ ನೋಡಲೆರಡು ಕಣ್ಣು ನನಗೆ ಸಾಲದಮ್ಮ