*****************music****************
ರಾಮ ಮಂತ್ರವ ಜಪಿಸೋ ಹೇ ಮನುಜ
ರಾಮ ಮಂತ್ರವ ಜಪಿಸೋ
ರಾಮ ಮಂತ್ರವ ಜಪಿಸೋ ಹೇ ಮನುಜ
ರಾಮ ಮಂತ್ರವ ಜಪಿಸೋ
ಆ ಮಂತ್ರ ಈ ಮಂತ್ರ ನೆಚ್ಚಿ ನೀ ಕೆಡ ಬೇಡ
ಆ ಮಂತ್ರ ಈ ಮಂತ್ರ ನೆಚ್ಚಿ ನೀ ಕೆಡ ಬೇಡ
ಸೋಮಶೇಖರ ತನ್ನ ಸತಿಗೆ ಪೇಳಿದ ಮಂತ್ರ
ರಾಮ ಮಂತ್ರವ ಜಪಿಸೋ ಹೇ ಮನುಜ
ರಾಮ ಮಂತ್ರವ ಜಪಿಸೋ
*******************music*****************
ಕುಲಹೀನನಾದರು ಕೂಗಿ ಜಪಿಸುವ ಮಂತ್ರ
ಸಲೆಬೀದಿಯೊಳು ನುಡಿವ ಮಂತ್ರ
ಕುಲಹೀನನಾದರು ಕೂಗಿ ಜಪಿಸುವ ಮಂತ್ರ
ಸಲೆಬೀದಿಯೊಳು ನುಡಿವ ಮಂತ್ರ
ಹಲವು ಪಾಪಂಗಳ ಹತಗೊಳಿಸುವ ಮಂತ್ರ
ಹಲವು ಪಾಪಂಗಳ ಹತಗೊಳಿಸುವ ಮಂತ್ರ
ಸುಲಭದಿಂದಲಿ ಸ್ವರ್ಗ ಸೂರೆಗೊoಬುವ ಮಂತ್ರ
ರಾಮ ಮಂತ್ರವ ಜಪಿಸೋ ಹೇ ಮನುಜ
ರಾಮ ಮಂತ್ರವ ಜಪಿಸೋ
*********************music****************
ಮಾನಮೌನಂಗಳಿಗೆ ಸಾಧನದ ಮಂತ್ರ
ಜ್ಞಾನಿಗಳು ಮನದಿ ಧ್ಯಾನಿಪ ಮಂತ್ರ
ಸ್ನಾನ ಮೌನಂಗಳಿಗೆ ಸಾಧನದ ಮಂತ್ರ
ಜ್ಞಾನಿಗಳು ಮನದಿ ಧ್ಯಾನಿಪ ಮಂತ್ರ
ಹೀನಗುಣಂಗಳ ಹಿಂಗಿಸುವ ಮಂತ್ರ
ಹೀನಗುಣಂಗಳ ಹಿಂಗಿಸುವ ಮಂತ್ರ
ಏನೆಂಬೆ ವಿಭಿಶಣಗೆ ಪಟ್ಟಗಟ್ಟಿದ ಮಂತ್ರ
ರಾಮ ಮಂತ್ರವ ಜಪಿಸೋ ಹೇ ಮನುಜ
ರಾಮ ಮಂತ್ರವ ಜಪಿಸೋ
*******************music*******************
ಸಕಲವೇದಂಗಳಿಗೆ ಸಾರವೆನಿಪ ಮಂತ್ರ
ಮುಕುತಿಮಾರ್ಗಕೆ ಇದೆ ಮೂಲ ಮಂತ್ರ
ಸಕಲವೇದಂಗಳಿಗೆ ಸಾರವೆನಿಪ ಮಂತ್ರ
ಮುಕುತಿಮಾರ್ಗಕೆ ಇದೆ ಮೂಲ ಮಂತ್ರ
ಭಕುತಿರಸಕೆ ಬಟ್ಟೆ ಒಮ್ಮೆತೋರುವ ಮಂತ್ರ
ಭಕುತಿರಸಕೆ ಬಟ್ಟೆ ಒಮ್ಮೆತೋರುವ ಮಂತ್ರ
ಸುಖನಿಧಿ ಪುರಂದರ ವಿಠಲನ ಮಂತ್ರ
ರಾಮ ಮಂತ್ರವ ಜಪಿಸೋ ಹೇ ಮನುಜ
ರಾಮ ಮಂತ್ರವ ಜಪಿಸೋ ಹೇ ಮನುಜ
ರಾಮ ಮಂತ್ರವ ಜಪಿಸೋ……………………
############END###################