ಗಗನದ ಸೂರ್ಯ ಮನೆ ಮೇಲೆ
ನೀ ನನ್ನ ಸೂರ್ಯ ಹಣೆ ಮೇಲೆ
ಚಿಲಿಪಿಲಿ ಹಾಡು ಎಲೆ ಮೇಲೆ
ನಿನ್ನ ಪ್ರೀತಿ ಹಾಡು ಎದೆ ಮೇಲೆ
ಗಾಳಿ ಗಾಳಿ ತಂಪು ಗಾಳಿ
ಊರ ತುಂಬ ಇದೆಯೋ
ನಿನ್ನ ಹೆಸರ ಗಾಳಿಯೊಂದೆ
ನನ್ನ ಉಸಿರಲ್ಲಿದೆಯೋ
ನಮ್ಮ ಪ್ರೀತಿ ಬೆಳಗೋ ಇತಿಹಾಸವು
ನಿನ್ನ ಸಹಚಾರವೇ ಚೈತ್ರ
ಅಲ್ಲಿ ನನ್ನ ಇಂಚರ ಅಮರ
ತುಂತುರು ಅಲ್ಲಿ ನೀರ ಹಾಡು
ಕಂಪನ ಇಲ್ಲಿ ಪ್ರೀತಿ ಹಾಡು
ತುಂತುರು ಅಲ್ಲಿ ನೀರ ಹಾಡು
ಕಂಪನ ಇಲ್ಲಿ ಪ್ರೀತಿ ಹಾಡು
ಹಗಲಿರಲಿ ಇರುಳಿರಲಿ ನೀನಿರದೆ ಹೇಗಿರಲಿ
ನನ್ನ ತುಂಬು ಹೃದಯ ನೀ ತುಂಬಿದೆ
ನಿನ್ನ ಈ ತುಂಬು ಪ್ರೀತಿಯನು
ಕಣ್ಣ ಹಾಡಂತೆ ಕಾಯುವೆನು
ನಿನ್ನ ಈ ತುಂಬು ಪ್ರೀತಿಯನು
ಕಣ್ಣ ಹಾಡಂತೆ ಕಾಯುವೆನು